ಎಸ್ತೇರಳು 4:2

ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.

ಸಂದರ್ಭದೊಂದಿಗೆ ಓದಿ · ಎಸ್ತೇರಳು 4

1ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.

2ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.

3ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.

4ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.

ಎಸ್ತೇರಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी