ಯೆರೆಮಿಯ 49:22

ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 49

20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.

21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.

22ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.

23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.

24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.

ಯೆರೆಮಿಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी