ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
22ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ