ಯೆಶಾಯ 61:10

ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 61

8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.

10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.

11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.

ಯೆಶಾಯ 61 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी