೧ ಸಮುವೇಲನು 1:26

ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 1

24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.

25ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.

26ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.

27ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.

28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.

೧ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी