ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
7ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ