ಅರಣ್ಯಕಾಂಡ 12:13

ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 12

11ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.

12ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

13ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.

15ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.

ಅರಣ್ಯಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी