ಯೆಶಾಯ 1:18

ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 1

16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.

18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;

20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.

ಯೆಶಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी