ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
44ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
47ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
48ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ