ಧರ್ಮೋಪದೇಶಕಾಂಡ 31:9

ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 31

7ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.

8ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.

9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

10ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ

11ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.

ಧರ್ಮೋಪದೇಶಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी