ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
16ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
19ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ