ಲೂಕನು 3:10

ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.

ಸಂದರ್ಭದೊಂದಿಗೆ ಓದಿ · ಲೂಕನು 3

8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.

10ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.

11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.

12ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.

ಲೂಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी