ಯಾಜಕಕಾಂಡ 1:14

ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 1

12ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.

13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.

14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.

15ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.

16ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.

ಯಾಜಕಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी