ಯೆರೆಮಿಯ 20:11

ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 20

9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.

10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.

11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.

12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.

13ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.

ಯೆರೆಮಿಯ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी