ಮಲಾಕಿಯ 3:13

ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.

ಸಂದರ್ಭದೊಂದಿಗೆ ಓದಿ · ಮಲಾಕಿಯ 3

11ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

12ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.

14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.

15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

ಮಲಾಕಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी