೨ ಕೊರಿಂಥದವರಿಗೆ 9:12

ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 9

10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)

11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.

12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.

13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.

14ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.

೨ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी