ಮಿಕ 6:4

ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.

ಸಂದರ್ಭದೊಂದಿಗೆ ಓದಿ · ಮಿಕ 6

2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.

3ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.

4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.

5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.

6ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?

ಮಿಕ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी