ಅರಣ್ಯಕಾಂಡ 8:6

ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 8

4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.

5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--

6ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.

7ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.

8ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.

ಅರಣ್ಯಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी