ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ