ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
27ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
28ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
29ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
31ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ