೨ ಸಮುವೇಲನು 16:21

ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 16

19ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.

20ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.

21ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.

22ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.

23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.

೨ ಸಮುವೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी