ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
3ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
4ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
5ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ