ಯೆಶಾಯ 49:19

ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 49

17ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.

18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.

19ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.

20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.

21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.

ಯೆಶಾಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी