ಲೂಕನು 15:4

ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?

ಸಂದರ್ಭದೊಂದಿಗೆ ಓದಿ · ಲೂಕನು 15

2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.

3ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--

4ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?

5ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.

6ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.

ಲೂಕನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी