ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
4ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
7ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ