ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
4ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
5ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ