೧ ಅರಸುಗಳು 18:13

ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

11ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ

12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.

13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?

14ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.

15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी