ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ