ಯೆರೆಮಿಯ 2:13

ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.

12ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.

13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.

14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?

15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी