೧ ಸಮುವೇಲನು 5:5

ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 5

3ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.

4ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.

5ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.

6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.

7ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.

೧ ಸಮುವೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी