೧ ಪೂರ್ವಕಾಲವೃತ್ತಾಂತ 29:22

ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 29

20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.

21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.

22ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.

23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.

24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.

೧ ಪೂರ್ವಕಾಲವೃತ್ತಾಂತ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी