೧ ಅರಸುಗಳು 15:20

ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 15

18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.

19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.

20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.

21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.

22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.

೧ ಅರಸುಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी