ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
7ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ