ವಿಮೋಚನಕಾಂಡ 14:29

ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 14

27ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.

28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.

29ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.

30ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.

31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

ವಿಮೋಚನಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी