ನ್ಯಾಯಸ್ಥಾಪಕರು 9:17

ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 9

15ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.

16ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ

17ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು

18ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,

19ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.

ನ್ಯಾಯಸ್ಥಾಪಕರು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी