೨ ಅರಸುಗಳು 20:10

ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 20

8ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.

9ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.

10ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.

11ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.

12ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.

೨ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी