ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
29ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ