ಯೆಹೆಜ್ಕೇಲನು 33:21

ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 33

19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.

20ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.

21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.

22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.

23ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--

ಯೆಹೆಜ್ಕೇಲನು 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी