ವಿಮೋಚನಕಾಂಡ 9:21

ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 9

19ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.

20ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.

21ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.

22ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.

23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.

ವಿಮೋಚನಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी