ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
2ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
3ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
4ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
5ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ