ಅಪೊಸ್ತಲರ ಕೃತ್ಯಗಳು 13:17

ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.

17ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.

18ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು

19ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी