ಮಾರ್ಕನು 16:9

ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.

ಸಂದರ್ಭದೊಂದಿಗೆ ಓದಿ · ಮಾರ್ಕನು 16

7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.

8ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.

9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.

10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.

11ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.

ಮಾರ್ಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी