ಯಾಕೋಬನು 2:19

ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.

ಸಂದರ್ಭದೊಂದಿಗೆ ಓದಿ · ಯಾಕೋಬನು 2

17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.

18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.

19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.

20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?

21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

ಯಾಕೋಬನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी