೧ ಕೊರಿಂಥದವರಿಗೆ 7:3

ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 7

1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.

2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.

3ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.

4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.

5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.

೧ ಕೊರಿಂಥದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी