೧ ಥೆಸಲೊನೀಕದವರಿಗೆ 2:10

ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 2

8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.

9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.

10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.

11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.

12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.

೧ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी