ಯೆಶಾಯ 65:10

ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 65

8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.

9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.

10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.

11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.

12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

ಯೆಶಾಯ 65 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी