ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ