ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
1ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ