ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
10ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
11ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
12ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
13ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
14ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ