ವಿಮೋಚನಕಾಂಡ 17:12

ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 17

10ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.

11ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.

12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.

13ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.

14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.

ವಿಮೋಚನಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी